ಹಾಸನ: ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಮಾಡುವುದನ್ನು ಬಿಟ್ಟು ಮೊಬೈಲ್ ನೋಡುತ್ತಾ ಕಾಲಹರಣ ಮಾಡುತ್ತಿದ್ದ ಎಂಟು ನೌಕರರಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ನೋಟಿಸ್ ಜಾರಿ ಮಾಡಿದ್ದಾರೆ.
ಚನ್ನರಾಯಪಟ್ಟಣ, ಅರಕಲಗೂಡು ತಾಲ್ಲೂಕಿನ ಚೆಕ್ ಪೋಸ್ಟ ಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿದರು. ಕೆಲ ಹೊತ್ತು ದೂರದಲ್ಲಿ ನಿಂತು ಚೆಕ್‌ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಕಾರ್ಯವೈಖರಿ ವೀಕ್ಷಿಸಿದ ಜಿಲ್ಲಾ ಚುನಾವಣಾ ಅಧಿಕಾರಿ ಸಿಬ್ಬಂದಿ ವಾಹನ ತಪಾಸಣೆ ಮಾಡುವ ಬದಲಾಗಿ ತಮ್ಮ ಮೊಬೈಲ್‌ಗಳನ್ನು ನೋಡುತ್ತಾ ಕುಳಿತಿದ್ದನ್ನು ಗಮನಿಸಿದರು.
ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅವರು ನೋಟಿಸ್ ಜಾರಿ ಮಾಡಿದರು.
ಮುಂದೆ ಈ ರೀತಿಯ ತಪ್ಪುಗಳು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಜಿಲ್ಲೆಯಾದ್ಯಂತ 22 ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ.
0 Comments