ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಕರಡಿಗಾಲ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 8 ಎಕರೆಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಸರ್ಕಾರಿ ಗೋಮಾಳದಲ್ಲಿ ಬೆಳೆದಿದ್ದ ಕುರುಚಲ ಗಿಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರ ಕರೆಯ ಮೇರೆಗೆ ಸ್ಥಳಕ್ಕೆ ಅರ್ಧ ಗಂಟೆ ಒಳಗೆ ಧಾವಿಸಿದ ಸಕಲೇಶಪುರ ತಾಲ್ಲೂಕು ಅಗ್ನಿಶಾಮಕ ದಳದ ಅಧಿಕಾರಿ ರಾಜು ಹಾಗೂ ಸಿಬ್ಬಂದಿ ಬೆಂಕಿ ನಂದಿಸಲು ಹರಸಹಸಪಟ್ಟರು. ಅಕ್ಕಪಕ್ಕದ ಕಾಫಿ ತೋಟಕ್ಕೆ ಬೆಂಕಿ ತಗುಲುವ ಮುನ್ನವೇ ಬೆಂಕಿ ನಂದಿಸಿದ್ದರಿಂದ ಅಪಾರ ನಷ್ಟವನ್ನು ತಪ್ಪಿಸಿದಂತಾಗಿದೆ.
0 Comments