ಹಳ್ಳಕ್ಕೆ ಉರುಳಿದ ಕಾರುಯುವಕನಿಗೆ ಗಂಭೀರ ಗಾಯ



ಹಾಸನ: ತಾಲ್ಲೂಕಿನ ಜವೇನಹಳ್ಳಿ ಗ್ರಾಮದ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಕೆನರಾ ಬ್ಯಾಂಕ್ ಉದ್ಯೋಗಿ ಆಗಿರುವ ಕ್ಯಾತನಹಳ್ಳಿ ಗ್ರಾಮದ ರಜತ್ ಗಾಯಾಳು. ವೇಗವಾಗಿ ಬಂದ ಕಾರು ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ರಜತ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments