ಜೆಡಿಎಸ್ ಪ್ರಚಾರಕ್ಕೆ ಬಿಜೆಪಿ ತಿರುಗೇಟುಬೆಂಬಲಿಗರಿಂದ ನಾಮಪತ್ರ ಸಲ್ಲಿಕೆಗೆ ಮುಂದಾದ್ರಾ ಪ್ರೀತಂ ?


ಹಾಸನ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದ್ದು, ಪ್ರೀತಂ ಗೌಡ ಅವರು ತಮ್ಮ ಬೆಂಬಲಿಗರಿಂದ ನಾಮಪತ್ರ ಸಲ್ಲಿಸಿ ಜೆಡಿಎಸ್ ಗೆ ಠಕ್ಕರ್ ಕೊಡುತ್ತಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಚ್.ಪಿ.ಕಿರಣ್‌ಕುಮಾರ್ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಕೆಗೆ ತಯಾರಿ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡರ ಅತ್ಯಾಪ್ತರ ಬಣದಲ್ಲಿ ಕಿರಣ್‌ಕುಮಾರ್ ಗುರುತಿಸಿಕೊಂಡಿದ್ದಾರೆ. ತಮ್ಮ ಬೆಂಬಲಿಗರ ಜೊತೆ ಹಾಸನದ ಸಿದ್ದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಪ್ರೀತಂ ಗೌಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪ್ರಚಾರ ಶುರು ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಠಕ್ಕರ್ ಕೊಡಲು ಹೀಗೆ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿವೆ.
ಮೈತ್ರಿ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ. ಟಿಕೆಟ್ ಯಾರಿಗೆ ಬೇಕಾದರೂ ಆಗಬಹುದು. ಆದ್ದರಿಂದ ಪ್ರಚಾರ ಶುರು ಮಾಡಿದ್ದೇವೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ. ಜೆಡಿಎಸ್ ನಾಯಕರಿಗೆ ಈ ನಡೆ ತಲೆಬಿಸಿ ತಂದಿಟ್ಟಿದೆ.

Post a Comment

0 Comments