ಮೈತ್ರಿ ಬ್ಯಾನರ್ ಮಿಂಚಿಂಗ್ಮೊದಲ ಬಾರಿಗೆ ಕಾಣಿಸಿದ ಬಿಜೆಪಿ ನಾಯಕರ ಫೋಟೊ


ಹಾಸನ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿಯಾಗಿದ್ದು, ಜೆಡಿಎಸ್ ಭದ್ರಕೋಟೆ ಹಾಸನ ಕ್ಷೇತ್ರ ದಳಪತಿಗಳಿಗೆ ನಿಕ್ಕಿಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿವೆ.

 ಹಾಸನದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಎಸ್ಸಿ-ಎಸ್ಟಿ ಸಮಾವೇಶ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿ ಜೆಡಿಎಸ್ ನ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ನಗರದ ಖಾಸಗಿ ಹೋಟೆಲ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ದಲಿತರ ಸಭೆ ನಡೆಸಲಾಗಿತ್ತು. ಆ ಸಭೆಗೆ ಠಕ್ಕರ್ ಕೊಡಲು ಇಂದಿನ ಸಭೆ ಹಮ್ಮಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಇನ್ನು ಸಮಾವೇಶಕ್ಕೆ ಹಾಕಲಾಗಿರುವ ಬ್ಯಾನರ್ ನಲ್ಲಿ ಬಿಜೆಪಿಯ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಶಾಸಕ ಪ್ರೀತಂ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ, ಎ.ಟಿ.ರಾಮಸ್ವಾಮಿ, ಎಚ್.ಎಂ.ವಿಶ್ವನಾಥ್, ಬಿ.ಆರ್.ಗುರುದೇವ್ ಅವರ ಫೋಟೊಗಳನ್ನು ಹಾಕಲಾಗಿದ್ದು, ಮೈತ್ರಿ ಕಡೆಯಿಂದ ಅದ್ದೂರಿ ಪ್ರಚಾರ ನಡೆಸಲಾಗುತ್ತಿದೆ.

Post a Comment

0 Comments