ಹಾಸನ: ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಬೆಳಗ್ಗೆ 11-15 ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.
ಮೊಮ್ಮಗನ ನಾಮಪತ್ರ ಸಲ್ಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಾಥ್ ನೀಡಲಿದ್ದಾರೆ.
ಇಂದು ಒಂದು ಪ್ರತಿ ನಾಮಪತ್ರ ಸಲ್ಲಿಸಲಿದ್ದಾರೆ.
ಮತ್ತೊಮ್ಮೆ ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನು ಜಿಲ್ಲಾಧಿಕಾರಿ ಕಚೇರಿ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
0 Comments