ಹಾಸನ : ಬಿಜೆಪಿ ಮುಖಂಡ ಹಾಗೂ ವಕೀಲ ಜಿ.ದೇವರಾಜೇಗೌಡ ವಿರುದ್ಧ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ದೂರು ನೀಡಿದ ಹಿನ್ನಲೆ ಪ್ರಕರಣ ದಾಖಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಈ ಪ್ರಕರಣ ಮಹತ್ವ ಪಡೆದುಕೊಂಡಿದೆ.
ಐಪಿಸಿ ಸೆಕ್ಷನ್ 353 ರ ಅನ್ವಯ, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಮಾ.14 ರಂದು ಸಂಜೆ ತಮ್ಮ ಕಚೇರಿಗೆ ಬಂದಿದ್ದ ಜಿ.ದೇವರಾಜೇಗೌಡ ವಿನಾಕಾರಣ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಪಿಸಿದ್ದಾರೆ.
ಮಾ. 14ರ ಬಳಿಕ ಸುದ್ದಿಗೋಷ್ಟಿ ನಡೆಸಿದ್ದ ಜಿ.ದೇವರಾಜೇಗೌಡ ಅವರು ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಮಾ. 1ರಂದು ಹಾಸನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಜಿಲ್ಲಾಧಿಕಾರಿಗಳೇ ಹಣ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದರು.
0 Comments