ಇಂದು ಶ್ರೇಯಸ್ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಭರ್ಜರಿ ಸಿದ್ಧತೆ

ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಶ್ರೇಯಸ್‌ಪಟೇಲ್‌
ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಜ್ವಲ್ ವಿರುದ್ಧ ಅಖಾಡಕ್ಕಿಳಿದ ಶ್ರೇಯಸ್, ಇಂದು ಮಧ್ಯಾಹ್ನ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. 
ನಾಮಪತ್ರ ಸಲ್ಲಿಕೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, 
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಕಡೂರು ಶಾಸಕ ಆನಂದ್ ಹಾಜರಿರುವರು. ನಗರದ ಡೇರಿ ವೃತ್ತದಿಂದ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿಸಲಿದ್ದಾರೆ.

Post a Comment

0 Comments