ಹಾಸನ: ಹಾಸನದಲ್ಲಿ ಒಬ್ಬರು, ಮಂಡ್ಯದಲ್ಲಿ ಮತ್ತೊಬ್ಬರು ನಮಗೆ ಸಪೋರ್ಟ್ ಮಾಡ್ತಿಲ್ಲ. ಆದರೆ ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಂಡ್ಯ ಸಂಸದೆ ಸುಮಲತಾ, ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತಿನಿ. ಇವತ್ತು ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋಆಪರೇಟ್ ಮಾಡ್ತಿಲ್ಲ. ಅದರಿಂದ ಕುಮಾರಸ್ವಾಮಿಗೆ ಏನೋ ಅಪಾಯ ಆಗುತ್ತೆ ಅಂತ ಆತಂಕ ಇರುತ್ತೆ. ಆದರೆ ಆ ರೀತಿ ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ. ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 140 ಕೋಟಿ ಎನ್‌ಓಸಿ ರಿಲೀಸ್ ಮಾಡಿದ್ದಾರೆ. ಕಾಂಗ್ರೆಸ್ ನ ಯಾವ ತಂತ್ರಗಳು ಫಲಿಸುವುದಿಲ್ಲ ಎಂದರು.
0 Comments