ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಮಧ್ಯರಾತ್ರಿ 3.30ರ ವರೆಗೂ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಜಿಲ್ಲೆಯ ಹದಿನೆಂಟು ಕಡೆಗಳಲ್ಲಿ ಎಸ್‌ಐಟಿ ಟೀಂ ದಾಳಿ ನಡೆಸಿದೆ
ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ಎಸ್‌ಐಟಿ ಟೀಂ ತಲಾಷ್ ನಡೆಸಿದೆ.
ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ವಕೀಲ ಜಿ.ದೇವರಾಜೇಗೌಡ, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್ ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ದಾಳಿ ನಡೆದಿದೆ.
ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ನಿವಾಸ, ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ಶರತ್ ನಿವಾಸದಲ್ಲೂ ಶೋಧ ನಡೆಸಿರುವ ಅಧಿಕಾರಿಗಳು
ಶರತ್ ಐಫೋನ್ ವಶಕ್ಕೆ ಪಡೆದಿದ್ದಾರೆ.
0 Comments