ಜಿಲ್ಲಾ ಕಾರಾಗೃಹದತ್ತ ದೇವರಾಜೇಗೌಡ ಮೇ 24ರ ವರೆಗೆ ನ್ಯಾಯಾಂಗ ಬಂಧನ



ಹಾಸನ: ಅತ್ಯಾಚಾರ ಆರೋಪ ಪ್ರಕರಣದಲ್ಲಿ‌ ಬಂಧಿತರಾಗಿರುವ ವಕೀಲ ಜಿ. ದೇವರಾಜೇಗೌಡಗೆ ಮೇ. 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಹೊಳೆನರಸೀಪುರ ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ನಿನ್ನೆ ರಾತ್ರಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ಸಮೀಪ ಪೊಲೀಸರು ವಶಕ್ಕೆ ಪಡೆದಿದ್ದ ದೇವರಾಜೇಗೌಡ ಅವರನ್ನು ಹೊಳೆನರಸೀಪುರಕ್ಕೆ ಕರೆತಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಮೊಹಮದ್ ಸುಜೀತಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಿಚಾರಣೆ ನಡೆಸಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿತ್ತು.
ಇಂದು ಸಂಜೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಜೆಎಂಎಫ್‌ಸಿ ನ್ಯಾಯಾಧೀಶ ಎಸ್. ಸಿದ್ದರಾಮ್ ಅವರೆದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.
ಹತ್ತು ದಿನಗಳ ವರೆಗೆ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು ಎನ್ನಲಾಗಿದೆ. ವೈದ್ಯಕೀಯ ನ್ಯಾಯಾಧೀಶರ ಆದೇಶದ ಬಳಿಕ ಹೊಳೆನರಸೀಪುರ ನಗರ ಠಾಣೆ ಪಿಎಸ್ ಐ ಅಜಯಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹಕ್ಕೆ ಕರೆತರಲಾಗುತ್ತಿದೆ.

Post a Comment

0 Comments