ಜೈಲು ಪಾಲಾದ ಲಿಖಿತ್, ಚೇತನ್

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿರುವ 
ಚೇತನ್ ಹಾಗು ಲಿಖಿತ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳನ್ನು ಭಾನುವಾರ ನಗರ ಪೊಲೀಸ್ ‌ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಥಳ‌ಮಹಜರು ನಡೆಸಿದ ಬಳಿಕ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಬಳಿಕ
ಜೆಎಂಎಫ್‌ಸಿ ನ್ಯಾಯಾಧೀಶ ಗಿರೀಗೌಡ ಅವರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, 
ಇಬ್ಬರು ಆರೋಪಿಗಳಿಗೆ ಮೇ.25 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

Post a Comment

0 Comments