ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಇಂದು ಮುಂಜಾನೆ 3.15ಕ್ಕೆ ಎಸ್ ಐಟಿ ತಂಡ ಆಗಮಿಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದೆ.
ಎಸ್ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ಐದು ಕಾರುಗಳಲ್ಲಿ ಭೇಟಿ ನೀಡಿದ ತಂಡ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದ ಎಚ್.ಡಿ.ರೇವಣ್ಣ ಅವರಿಗೆ ಸೇರಿದ ಫಾರ್ಮ್‌ಹೌಸ್, ಘನ್ನಿಕಡ ಹಾಗೂ ಕಾಮೇನಹಳ್ಳಿ ಗ್ರಾಮದ ಬಳಿ ಇರುವ ಇನ್ನೆರಡು ಫಾರ್ಮ್ ಹೌಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣದ ಸ್ಥಳದ ಬಗ್ಗೆ ಮಾಹಿತಿ ಕಲೆ ಹಾಕಿರುವ ಎಸ್‌ಐಟಿ ಟೀಂ, ಪಡುವಲಹಿಪ್ಪೆ ಫಾರ್ಮ್‌ಹೌಸ್‌ನಲ್ಲಿರುವ ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರನ್ನು ವಿಚಾರಿಸಿದೆ.
ಪ್ರಜ್ವಲ್ ರೇವಣ್ಣ ಇಲ್ಲಿಗೆ ಎಷ್ಟು ದಿನಕ್ಕೊಮ್ಮೆ ಬರುತ್ತಿದ್ದರು. ಇಲ್ಲಿಯೇ ಉಳಿದುಕೊಳ್ಳುತ್ತಿದ್ದರಾ ಎಂಬೆಲ್ಲಾ ವಿಷಯಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.
0 Comments