ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ


ಸಕಲೇಶಪುರ : ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಯಿಂದ ವೃದ್ಧೆ ಗಾಯಗೊಂಡಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
 ಕೆಸಗುಲಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದರಿಂದ ಗಾಯಗೊಂಡಿದ್ದು, ಚಿಕಿತ್ಸೆಯಾಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

Post a Comment

0 Comments