ಹೆಚ್.ಡಿ.ರೇವಣ್ಣಗೆ ಜಾಮೀನು ಸದ್ಯಕ್ಕೆ ಜೈಲು ವಾಸ ಅಂತ್ಯ



ಬೆಂಗಳೂರು : ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ದೊರೆತಿದೆ. 
ಮೇ.4 ರಂದು ಎಸ್‌ಐಟಿ ಅಧಿಕಾರಿಗಳು ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲೇ ರೇವಣ್ಣ ಅವರನ್ನು ಬಂಧಿಸಿ, ತಮ್ಮ ವಶದಲ್ಲಿಟ್ಟುಕೊಂಡು ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿ, ಮೇ.7 ರಂದು ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಮೇ.14 ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಸತತವಾಗಿ ಅರ್ಜಿ ವಿಚಾರಣೆ ಮುಂದೂಡಿಕೊಂಡು ಬಂದಿದ್ದ ನ್ಯಾಯಾಲಯ ಸೋಮವಾರ ಕೊನೆಗೂ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Post a Comment

0 Comments