ಹಾಸನ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿ ಮರಿಯಾ ನಗರದ ಬಳಿ ಘಟನೆ
ನಡೆದಿದೆ.
ಮರಿಯಾ ನಗರದ ಗಣೇಶ್ (40) ಮೃತ ವ್ಯಕ್ತಿ. ಸುರೇಶ್ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಬೈಕ್ ಸವಾರ.
ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕೊಣನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
0 Comments