ಹಾಸನ: ಅಶ್ಲೀಲ ವಿಡಿಯೋ ಹೆಸರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬುಧವಾರ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ವರೆಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು
ಪೆನ್ ಡ್ರೈವ್ ಹಂಚಿದವರ ಬಂಧಿಸಬೇಕೆಂದು ಒತ್ತಾಯಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತೇಜೋವಧೆ ಮಾಡಲಾಗುತ್ತಿದೆ. ಕೀಳು ಮಟ್ಟದ ರಾಜಕಾರಣ ಮಾಡಿದವರಿಗೆ ಶಿಕ್ಷೆಯಾಗಬೇಕೆಂದರು.
ಶಾಸಕ ಸ್ವರೂಪ್ ಸೇರಿ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
0 Comments