ಪಟ್ಲ ಬೆಟ್ಟದಲ್ಲಿ ಪ್ರವಾಸಿಗನ ಮೇಲೆ ಹಲ್ಲೆಅರಣ್ಯ ಸಚಿವರ ಖಡಕ್‌ ಸಂದೇಶವೇನು?


ಹಾಸನ : ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟದ ಪ್ರವಾಸಿ ತಾಣಕ್ಕೆ ತಲುಪಲು ನಿರ್ಮಿಸಿರುವ ರಸ್ತೆಗಾಗಿ ಮರಗಳ ಹನನ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು ಸೂಚಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಈ ಕುರಿತು ಪತ್ರ ಬರೆದಿರುವ ಅವರು, ಮೂರು ದಿನಗಳ ಒಳಗೆ ವರದಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಅರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೆ ವಾಹನ ಓಡಾಟಕ್ಕೆ ಖಾಸಗಿಯಾಗಿ ರಸ್ತೆ ನಿರ್ಮಿಸಲಾಗಿದೆ. ರಸ್ತೆಗಾಗಿ ಅನಧಿಕೃತವಾಗಿ ಮರ ಕಡಿಯಲಾಗಿದೆ ಎಂಬ ದೂರು ಕೇಳಿಬಂದಿದೆ.
ಪಟ್ಲ ಬೆಟ್ಟಕ್ಕೆ ನಿರ್ಮಿಸಲಾಗಿರುವ ರಸ್ತೆ ಅಧಿಕೃತವೇ, ನಿಯಮಾನುಸಾರ ಫಾರೆಸ್ಟ್‌ ಕ್ಲಿಯರೆನ್‌್ಸ ಪಡೆಯಲಾಗಿದೆಯೇ, ರಸ್ತೆ ನಿರ್ಮಾಣಕ್ಕೆ ಮರ ಕಡಿಯಲು ಅನುಮತಿ ಪಡೆಯಲಾಗಿತ್ತೋ-ಇಲ್ಲವೋ ಎಂಬ ಬಗ್ಗೆ ಸ್ಥಳಕ್ಕೆ ಭೇಟಿ ಪರಿಶೀಲಿಸಬೇಕು. ಅನುಮತಿ ಇಲ್ಲದೆ ರಸ್ತೆ ನಿರ್ಮಿಸಿದ್ದರೆ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.

Post a Comment

0 Comments