ಹಾಸನ: ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಹೇಮಾವತಿ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.
ಜಿಲ್ಲೆಯ ಮಲೆನಾಡು ಹಾಗು ಮೂಡಿಗೆರೆ ಭಾಗದಲ್ಲಿ ಯತೇಚ್ಛ ಮಳೆ ಸುರಿಯುತ್ತಿರುವ ಹಿನ್ನಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಆರು ಕ್ರಸ್ಟ್ ಗೇಟ್ ಮೂಲಕ 65 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ನಿರ್ದೇಶನ ನೀಡಿದ್ದಾರೆ.
0 Comments