ಹಾಸನ: ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನಾಗೇಶ್ ಎಂ.ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಹೋಬಳಿ ಮಾಚಬೂವನಹಳ್ಳಿ ಗ್ರಾಮದ ನಾಗೇಶ್ ಎಂ.ಡಿ ಅವರು ವೃತ್ತಿಯಲ್ಲಿ ಸೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕ್ರಿಯಾಶೀಲರಾಗಿರುವ ನಾಗೇಶ್ ಅವರು ವೃತ್ತಿಯೊಟ್ಟಿಗೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡವರಾಗಿದ್ದಾರೆ. ಅವರು ಈ ಹಿಂದೆ ರೋಟರಿ ಕ್ಲಬ್ ಆಫ್ ಕ್ವಾಂಟಾದಲ್ಲಿ ಪದಾಧಿಕಾರಿಯಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
0 Comments