ಹಾಸನ: ಮಲೆನಾಡು ಭಾಗದಲ್ಲಿ ಮಳೆರಾಯನ ಅಬ್ಬರ ಮುಂದುವರಿದಿರುವ ಹಿನ್ನಲೆ ಜು. 31ರ ಬುಧವಾರ ಸಕಲೇಶಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ ಹಾಗು ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ದಿನದ ತರಗತಿಗಳನ್ನು ಸೆ. 14ರಂದು ನಡೆಸಿ ಸರಿದೂಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಮಳೆ ಹೆಚ್ಚಾಗಿರುವ ಹಿನ್ನಲೆ ಶಾಲೆಗಳಿಗೆ ರಜೆ ಘೋಷಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಸಹ ಆಗ್ರಹಿಸಿದ್ದರು.
0 Comments