ನಗರಸಭೆ ಮಾಜಿ ಸದಸ್ಯ ರಮೇಶ್‌ ಬಾಬು ನಿಧನ


ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ನಗರಸಭೆ ಮಾಜಿ ಸದಸ್ಯ ರಮೇಶ್‌ ಬಾಬು (53) ಸೋಮವಾರ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆ ಹಾಸನದ ಹಿಮ್ಸೌಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದರು. 
ರಮೇಶ್‌ ಬಾಬು ಅವರು 2008ರ ಬಿಜೆಪಿ ಆಡಳಿತಾವಧಿಯಲ್ಲಿ ನಗರಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ 19ನೇ ವಾರ್ಡ್‌ನಿಂದ ಗೆಲುವು ಸಾಧಿಸಿದ ಬಿಜೆಪಿಯ ಏಕೈಕ ನಗರಸಭೆ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಹುಟ್ಟೂರು ತೇಜೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.

Post a Comment

0 Comments