ಸಕಲೇಶಪುರದಲ್ಲಿ ಮಿತಿ ಮೀರಿದ ಕಾಡಾನೆ ಕಾಟ
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ.
ಪರಿಣಾಮ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸಕಲೇಶಪುರ ತಾಲ್ಲೂಕಿನ ವಳಲಹಳ್ಳ ಗ್ರಾಮದಲ್ಲಿ ಕಾಡಾನೆಗಳು ಹಸನಾಗಿ ಬೆಳೆದಿದ್ದ ಭತ್ತದ ಬೆಳೆಯನ್ನು ತಿಂದು, ತುಳಿದು ನಾಶ ಮಾಡಿವೆ.
ಭತ್ತದ ಬೆಳೆ ಕಳೆದುಕೊಂಡಿರುವ ರೈತರು ಕಂಗಾಲಾಗಿದ್ದು ಹಣೆ ಬಡಿದುಕೊಳ್ಳುತ್ತಿದ್ದಾರೆ. ಗ್ರಾಮದ ಆನಂದಗೌಡ ಹಾಗೂ ಇತರೆ ರೈತರಿಗೆ ಸೇರಿದ ಭತ್ತದ ಗದ್ದೆಗಳು ನಾಮಾವಶೇಷವಾಗಿದೆ.
ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿವೆ. ಅಪಾರ ಹಾನಿ ಸಂಭವಿಸಿದರೂ ಅರಣ್ಯಾಧಿಕಾರಿಗಳು ಭೇಟಿ ನೀಡಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0 Comments