ಹಾಸನಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ

 

ಕನ್ನಡ ಜ್ಯೋತಿ ರಥ ಯಾತ್ರೆಗೆ ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ

ಹಾಸನ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥ ಯಾತ್ರೆಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹಾಗು ಇತರ ಅಧಿಕಾರಿಗಳು ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಅದ್ದೂರಿ ಸ್ವಾಗತ ಕೋರಿದರು.

ಮಂಡ್ಯದಲ್ಲಿ ಡಿ. 20 ರಿಂದ 23ರ ವರೆಗೆ ಸಮ್ಮೇಳನ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜ್ಯೋತಿ ರಥ ಸಂಚಾರ ಆರಂಭಿಸಿದೆ. 

ಸಾರ್ವಜನಿಕರಲ್ಲಿ ಕನ್ನಡ ಜಾಗೃತಿ ಮೂಡಿಸುವ ಉದ್ದೇಶದಿಂದ ನಿರ್ಮಾಣವಾದ ಕನ್ನಡ ರಥ ಆಕರ್ಷಕವಾಗಿದೆ. ರಥದ ಹಿಂಭಾಗ ಎತ್ತುಗಳೊಂದಿಗೆ ರೈತ ನಿಂತಿದ್ದರೆ ಮುಂಭಾಗ ಭುವನೇಶ್ವರಿ, ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗಳಿವೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ಕಾಣಬಹುದಾಗಿದೆ.

ರಥ ಸ್ವಾಗತ ಸಮಾರಂಭದಲ್ಲಿ ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜೀತಾ, ಎಡಿಸಿ ಕೆ.ಟಿ.ಶಾಂತಲಾ ಹಾಗೂ ಇತರರಿದ್ದರು.

Post a Comment

0 Comments