ಈ ಬಾರಿಯೂ ಮದ್ಯ ಪ್ರಿಯರ ಪ್ರತಿಭಟನೆ
ಅರಸೀಕೆರೆ: ನಿತ್ಯ ದುಡಿ, ಸತ್ಯ ನುಡಿ, ಸ್ವಲ್ಪ ಕುಡಿ, ಮನೆಗೆ ನಡಿ ಎಂಬ ಘೋಷ ವಾಕ್ಯದೊಂದಿಗೆ ಕಳೆದ ಚಳಿಗಾಲದ ಅಧಿವೇಶನದಲ್ಲಿ ವಿಭಿನ್ನವಾಗಿ ಸರ್ಕಾರದ ಗಮನ ಸೆಳೆದಿದ್ದ ಮದ್ಯಪಾನ ಪ್ರಿಯರ ಸಂಘದಿಂದ ಈ ಬಾರಿಯೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಕಳೆದ ವರ್ಷದ ಅಧಿವೇಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ತಮ್ಮ ಬೇಡಿಕೆ ಸಲ್ಲಿಸಿದ್ದ ಮದ್ಯಪಾನ ಪ್ರಿಯರ ಸಂಘದ ಪದಾಧಿಕಾರಿಗಳು ಬೇಡಿಕೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ. ವರ್ಷವಾದರೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟುವ ಮದ್ಯ ಪ್ರತಿಯರನ್ನು ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ಡಿ. 9ರಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸರ್ಕಾರದ ವಿರುದ್ಧ ಧರಣಿ ನಡೆಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಬೋರೆಹಳ್ಳಿ ವೆಂಕಟೇಶ್ ಗೌಡ ತಿಳಿಸಿದ್ದಾರೆ.

0 Comments