ಜೆಡಿಎಸ್-ಬಿಜೆಪಿಯವರು ಪರಮ ದ್ರೋಹಿಗಳು: ಸಿಎಂ

ಜೆಡಿಎಸ್-ಬಿಜೆಪಿಯವರು ಪರಮ ದ್ರೋಹಿಗಳು: ಸಿಎಂ



ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು.

ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡಿದರು. 

ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. 

ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ , ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಈಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು. 

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದು ಒಂದೊಂದಾಗಿ ವಿವರಿಸಿದರು.

Post a Comment

0 Comments