ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಸಂಪೂರ್ಣ ಭಸ್ಮ

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಸಂಪೂರ್ಣ ಭಸ್ಮ



ಹಾಸನ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಬೆಂಕಿ  ಕಾಣಿಸಿಕೊಂಡು ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. 

ಸಕಲೇಶಪುರ ತಾಲ್ಲೂಕಿನ  ಎತ್ತಿನಹಳ್ಳ ಬಳಿ ಮುಂಜಾನೆ ಘಟನೆ ನಡೆದಿದೆ. ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ನಲ್ಲಿ ಅವಘಡ ನಡೆದಿದೆ. ಬಸ್ ನಲ್ಲಿ ಮೂವತ್ತು ಪ್ರಯಾಣಿಕರಿದ್ದರು. ಬೆಂಕಿ ಹೊತ್ತಿಕೊಳ್ಳುದಿದ್ದಂತೆ ಚಾಲಕ ಯೋಗೀಶ್ ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ್ದಾರೆ.

ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Post a Comment

0 Comments