ಮೇ 1ರಿಂದ 4ರ ವರೆಗೆ ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ
ಮಡಿಕೇರಿ: ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್ ತಂಡಕ್ಕೆ ಎರಡು ಲಕ್ಷ ರೂ ನಗದು ಬಹುಮಾನ ನೀಡುವ ಆಲ್ ಸ್ಟಾರ್ ಎಫ್.ಸಿ ಗೋಣಿಕೊಪ್ಪಲು ತಂಡವು ಆಯೋಜಿಸರುವ ಆಲ್ ಇಂಡಿಯಾ ಸೂಪರ್ ಫೈವ್ಸ್ ಹೊನಲು ಬೆಳಕಿನ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯು ಮೇ ತಿಂಗಳ ಒಂದರಿಂದ ನಾಲ್ಕರವರೆಗೆ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಮೈದಾನ ಶುಲ್ಕ 7500ರೂ ನಿಗದಿಪಡಿಸಿದ್ದು,ಚಾಂಪಿಯನ್ ತಂಡಕ್ಕೆ ಆಕರ್ಷಕ ಟ್ರೋಫಿಯೊಂದಿಗೆ 2ಲಕ್ಷ ರೂ ನಗದು ಬಹುಮಾನ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಒಂದು ಲಕ್ಷ ರೂ ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ.ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೂ ಕೂಡ ಆಕರ್ಷಕ ಟ್ರೋಫಿಯೊಂದಿಗೆ
ಹಲವು ವೈಯಕ್ತಿಕ ಪ್ರಶಸ್ತಿಗಳನ್ನು ಕೂಡ ನೀಡಲಾಗುತ್ತಿದ್ದು, ಆಸಕ್ತ ತಂಡಗಳು ಹೆಚ್ಚಿನ ಮಾಹಿತಿಗಾಗಿ 78298 63710, 78992 88471,7356590210 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

0 Comments