ಗ್ಯಾಸ್ ಸ್ಫೋಟ ಪ್ರಕರಣ: ಮಹಿಳೆ ಸಾವು
ಹಾಸನ: ತಿಂಡಿ ಬೇಯಿಸುತ್ತಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿಹೊತ್ತಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅರಕಲಗೂಡು ತಾಲ್ಲೂಕಿನ ಕೊಣನೂರು ಕುಂಚಿಟಗರ ಬೀದಿಯ ಮಂಗಳ (50) ಮೃತರು. ಯುಗಾದಿ ದಿನ ಅಡುಗೆ ಮಾಡುವಾಗ ಏಕಾಏಕಿ ಗ್ಯಾಸ್ ಸೋರಿಕೆಯಾಗಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳ ಅವರು ಮಂಗಳವಾರ ಮೃತಪಟ್ಟಿದ್ದಾರೆ. ಮೀನಾಕ್ಷಿ ಹಾಗೂ ರಾಧಾ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

0 Comments