ಹಾಸನ: ನಗರ ಸೇರಿ ಜಿಲ್ಲಾದ್ಯಂತ ಮಂಗಳವಾರ ಬೆಳಿಗ್ಗೆಯಿಂದ ಜೋರು ಮಳೆ ಸುರಿಯುತ್ತಿದೆ. ಬೆಳಿಗ್ಗೆ 8 ರಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಚೇರಿಗೆ ಹೋಗುವ ನೌಕರರು, ವ್ಯಾಪರಿಗಳು, ಉದ್ಯೋಗಿಗಳು ಪರದಾಡುವಂತಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ವಾಹನ ಸಂಚಾರವು ವಿರಳವಾಗಿದೆ. ಕೆಲವರು ಕೊಡೆ ನೆರವಿನಿಂದ ಸಂಚರಿಸುತ್ತಿದ್ದ ದೃಶ್ಯ ಕಂಡುಬಂತು. ಇನ್ನು ಎರಡು ದಿನ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
0 Comments