ಹೊಳೆನರಸೀಪುರ: ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದ ಸಾವು-ನೋವಿನ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳು ಆರಂಭದಲ್ಲೇ ಮುಖ್ಯಮಂತ್ರಿ ಗಮನಕ್ಕೆ ತರಬೇಕಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳ ಅಮಾನತು ನಿರ್ಧಾರವನ್ನು ಸಮರ್ಥಿಸಿಕೊಂಡರು.
ಸಂಸದ ಶ್ರೇಯಸ್ ಪಟೇಲ್ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಪಿಎಲ್ ವಿಜಯೋತ್ಸವ ವೇಳೆ ನಡೆದ ಅಹಿತಕರ ಘಟನೆ ಕುರಿತು ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗಾಗಲೇ ನಿವೃತ್ತ ನ್ಯಾಯಾಧೀಶರು, ಸಿಐಡಿ, ಬೆಂಗಳೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಯಾವುದಾದರೂ ಒಂದು ತನಿಖಾ ವರದಿ ಬರುವ ವರೆಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ನಡೆದಿರುವ ಘಟನೆ ಕುರಿತು ಹೊಳೆನರಸೀಪುರದಲ್ಲಿ ಕುಳಿತು ಹೀಗೇ ಅಂತ ಹೇಳಲು ಸಾಧ್ಯವಿಲ್ಲ ಎಂದರು.
0 Comments