ಹಾಸನ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂಧನ ಸಚಿವ ಶ್ರೀ ಕೆ.ಜೆ. ಜಾರ್ಜ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.
ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯಕರ್ತರು ಕೆಲಸ ಮಾಡಬೇಕೆಂದು ಸಚಿವರು ನಿರ್ದೇಶನ ನೀಡಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಅತ್ಯಂತ ಫಲಪ್ರದವಾಗಿದ್ದು ಕರ್ನಾಟಕ ಅತಿಹೆಚ್ಚು ತೆರಿಗೆ ಕಟ್ಟುತ್ತಿರುವ ದೇಶದ ಎರಡನೇ ರಾಜ್ಯವಾಗಿ ಹೊರ ಹೊಮ್ಮಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಸದೃಢವಾಗಿದ್ದು ಕಾರ್ಯಕರ್ತರು ಮುತುವರ್ಜಿಯಿಂದ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಸಂಸದ ಶ್ರೇಯಸ್ ಪಟೇಲ್,
ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಸೇರಿ ಇತರ ಮುಖಂಡರು ಭಾಗವಹಿಸಿದ್ದರು.
0 Comments