ಚೀಟಿ ಹಣಕ್ಕಾಗಿ ಜಗಳ: ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ



ಹಾಸನ: ಚೀಟಿ ಹಣದ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಚೀಟಿ ಹಣದ ವಿಚಾರಕ್ಕೆ ದಂಪತಿ ನಡುವೆ ಉಂಟಾದ ವಾಗ್ವಾದ ದುರಂತಕ್ಕೆ ತಿರುಗಿದೆ. ಪತಿ ಶಿವಯ್ಯ (65), ಪತ್ನಿ ಶಿವಮ್ಮ (60) ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆತನೇ ಅದೇ ಮಚ್ಚಿನಿಂದ ತನ್ನ ಕತ್ತು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗಾಯಾಳು ಶಿವಯ್ಯ ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post a Comment

0 Comments